Index   ವಚನ - 12    Search  
 
ಊರ್ಧ್ವ ಭೂಮಿಯ ವಿರಾಗದಲ್ಲಿ ಸಪ್ತಸಮುದ್ರಕ್ಕೆ ಭೂಮಿ ಒಂದೆ. ಭೂಮಿಯ ಮಧ್ಯದಲ್ಲಿ ಒಂದು ವಟವೃಕ್ಷ ಹುಟ್ಟಿತ್ತು. ಕೊಂಬು ಮೂರು, ಅದರ ಬೆಂಬಳಿಯಲ್ಲಿ ಹುಟ್ಟಿದ ಕವಲಿಗೆ ಲೆಕ್ಕವಿಲ್ಲ. ಆ ಆಲದ ಹಣ್ಣಿಂಗೆ ಮೋನದ ಹಕ್ಕಿ ಈರೇಳುಕೋಟಿ ಕೂಡಿ, ಎಂಬತ್ತುನಾಲ್ಕು ಲಕ್ಷ ಬೇಟೆಕಾರರ ಬಲೆಯೊಳಗಾಯಿತ್ತು. ಇದರ ಒಲವರವ ಕೇಳಿಹರೆಂದು, ಅಲೇಖಮಯನಾದ ಶೂನ್ಯ ಕಲ್ಲಿನ ನಿಳಯದೊಳಗಾದ.