Index   ವಚನ - 1    Search  
 
ಆಡು ಆರುದಿಂಗಳು ಹುಟ್ಟಿ, ಮೂರುದಿನ ಬದುಕಿ, ಒಂದುದಿನ ಸತ್ತಿತ್ತು. ಕುರಿ ಕುರುಹ ಮೇದು, ಮರಿಗೆ ಮೊಲೆಗೊಟ್ಟಿತ್ತು. ಮರಿಯು ಮೊಲೆಯ ನುಂಗಿ, ಕುರುಹಿನೊಳಗಡಗಿತ್ತು. ಆಡು ಕುರಿ ಬಂದ ಬಟ್ಟೆಯ ಸೋಧಿಸಿಕೊಂಡು, ತೋಳನ ತೊಡಕಿನಲ್ಲಿ ಸಾಯದೆ, ಅರಿ ವೀರಬೀರೇಶ್ವರಲಿಂಗವಾ.