Index   ವಚನ - 2    Search  
 
ಕಂಥೆಯ ಕಟ್ಟಿ, ತಿತ್ತಿಯ ಹೊತ್ತು, ಮರಿಯ ನಡಸುತ್ತ , ದೊಡ್ಡೆಯ ಹೊಡೆವುತ್ತ, ಅಡ್ಡಗೋಲಿನಲ್ಲಿ ಹೋಹ ಚುಕ್ಕಿ ಬೊಟ್ಟಿನವ ತಿಟ್ಟುತ್ತ, ಹಿಂಡನಗಲಿ ಹೋಹ ದಿಂಡೆಯ ಮಣೆಘಟ್ಟನ ಅಭಿಸಂದಿಯ ಕೋಲಿನಲ್ಲಿಡುತ್ತ. ಈ ಹಿಂಡಿನೊಳಗೆ ತಿರುಗಾಡುತಿದ್ದೇನೆ. ಈ ವಿಕಾರದ ಹಿಂಡ ಬಿಡಿಸಿ, ನಿಜನಿಳಯ ನಿಮ್ಮಂಗವ ತೋರಿ, ಸುಸಂಗದಲ್ಲಿರಿಸು, ಎನ್ನೊಡೆಯ ವೀರಬೀರೇಶ್ವರಲಿಂಗಾ.