Index   ವಚನ - 10    Search  
 
ಹೋತು ಹುಸಿ, ಆಡು ಬಹುಮಾತಿನ ನೀತಿ, ಕುರಿ ಸಕಲೇಂದ್ರಿಯದ ನೆಲ ಹೊಲ, ತಗರು ತಥ್ಯಮಿಥ್ಯದ ಹೋರಟೆ, ಹುಲಿ ದ್ವೇಷದಾಗರ, ತೋಳ ಕೊಂದು ತಿಂಬ ಕಾಟ. ಚೋರ ಮೃತ್ಯು ಇಂತಿವು ಮೊದಲಾದ ಬಹುವಿಧದ ಪ್ರಕೃತಿಗಳಲ್ಲಿ ಕಾಯದ ನೆಲಹೊಲನಲ್ಲಿ, ಸಕಲೇಂದ್ರಿಯವೆಂಬ ಹಿಂಡು ಮಂದೆಯಾಗಿವೇಕೊ? ಇದರ ಸಂಗವ ಬಿಡಿಸು, ನಿಮ್ಮ ನಿಜದಂಗವ ತೋರಿ, ಭವಪಾಶದಂಗವ ಹರಿದು, ನಿಮ್ಮ ಘನಲಿಂಗದಲ್ಲಿರಿಸು, ನೆರೆ ವೀರಬೀರೇಶ್ವರಾ.