Index   ವಚನ - 9    Search  
 
ಅರಸಿಗೆ ಆಚಾರ ಅನುಸರಣೆಯಾಯಿತ್ತೆಂದು, ಸದಾಚಾರಿಗಳೆಲ್ಲಾ ಬನ್ನಿರೆಂದು, ಕೂಲಿಗೆ ಹಾವ ಕಚ್ಚಿಸಿಕೊಂಡು ಸಾವತೆರೆದಂತೆ ದ್ರವ್ಯದ ಮುಖದಿಂದ ಸರ್ವರ ಕೂಡಿ ತಪ್ಪನೊಪ್ಪಗೊಳ್ಳಿಯೆಂದು ದೊಪ್ಪನೆ ಬೀಳುತ್ತ ತನ್ನ ವ್ರತದ ದರ್ಪಂಗೆಟ್ಟು ಕೀಲಿಗೆ ದೇವಾಲಯವ ನೋಡುವವನಂತೆ, ಕಂಬಳಕ್ಕೆ ಅಮಂಗಲವ ತಿಂಬವನಂತೆ, ಇವನ ದಂದುಗವ ನೋಡಾ! ಇವನ ಸಂಗವ ಮಾಡಿದವನು ಆಚಾರಕ್ಕೆ ಅಂದೆ ಹೊರಗು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವೆ ನೀನೆ ಬಲ್ಲೆ.