Index   ವಚನ - 12    Search  
 
ಆಚಾರ ಅನುಸರಣೆಯಾದಲ್ಲಿ ಅಲ್ಲ ಅಹುದೆಂದು ಎಲ್ಲರ ಕೂಡುವಾಗ ಗೆಲ್ಲ ಸೋಲದ ಕಾಳಗವೆ? ಶ್ರುತದಲ್ಲಿ ಕೇಳಿ, ದೃಷ್ಟದಲ್ಲಿ ಕಂಡು, ಅನುಮಾನದಲ್ಲಿ ಅರಿದು, ಸಂದೇಹವ ಬಿಟ್ಟು ಕಂಡ ಮತ್ತೆ ಆತನಂಗವ ಕಂಡಡೆ, ಸಂಗದಲ್ಲಿ ನುಡಿದಡೆ, ಈ ಗುಣಕ್ಕೆ ಹಿಂಗದಿದ್ದನಾದಡೆ ಲಿಂಗಕ್ಕೆ ಸಲ್ಲ, ಜಂಗಮಕ್ಕೆ ದೂರ, ಅದು ಕುಂಭೀನರಕ; ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಸಲ್ಲದ ನೇಮ.