Index   ವಚನ - 27    Search  
 
ಏಳುನೂರೆಪ್ಪತ್ತು ಅಮರಗಣಂಗಳಿಗೆಲ್ಲಕ್ಕೂ ತಮ್ಮ ತಮ್ಮ ಭಾವದ ಶೀಲ. ಗಂಗೆವಾಳುಕ ಸಮಾರುದ್ರರೆಲ್ಲಕ್ಕೂ ತಮ್ಮ ತಮ್ಮ ಮನಕ್ಕೆ ಸಂದ ಸಂದ ನೇಮ. ಮರ್ತ್ಯಕ್ಕೆ ಬಂದ ಪ್ರಮಥರೆಲ್ಲರೂ ತಾವು ಬಂದುದನರಿದು ಮುಂದಿನ ಪಯಣಕ್ಕೆ ಎಂದೆಂಬುದ ಕಂಡು, ಬಸವಣ್ಣನ ಮಣಿಹ ಎಂದಿಂಗೆ ಸಲೆ ಸಂದು ನಿಂದಿಹ ವೇಳೆಯನರಿವನ್ನಕ್ಕ ತಾವು ಕೊಂಡ ವ್ರತದಲ್ಲಿ ಭಯ ಭಂಗವಿಲ್ಲದೆ ನಿಂದಿರಬೇಕು, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದೊಳಗಹನ್ನಕ್ಕ.