Index   ವಚನ - 35    Search  
 
ಕಾಯಕಕೃತ್ಯ, ನೇಮಕೃತ್ಯ, ಆಚರಣೆಕೃತ್ಯ, ದಾಸೋಹಕೃತ್ಯ,ಭಾವಕೃತ್ಯ,ಸೀಮೆಕೃತ್ಯ, ಯಾಚಕಕೃತ್ಯ, ಗಮನಕೃತ್ಯ, ಲಿಂಗಕೃತ್ಯ, ಜಂಗಮಕೃತ್ಯ, ಪಾದೋದಕಕೃತ್ವ, ಪ್ರಸಾದಕೃತ್ಯ, ಕೊಡೆಕೊಳ್ಳೆನೆಂಬ ಉಭಯಕೃತ್ಯ, ಮರೆದರಿಯೆ ಅರಿದು ಮರೆಯೆನೆಂಬ ಅರಿವುಕೃತ್ಯ ತನ್ನ ಕೃತ್ಯಕ್ಕೆ ಆವುದು ನಿಷೇಧವೆಂದು ಬಿಟ್ಟಲ್ಲಿ, ರಾಜ ಹೇಳಿದನೆಂದು, ಗುರುವಾಜ್ಞೆಯ ಮೀರಿದಿರೆಂದು, ಶರಣರ ಸಮೂಹ ಹೇಳಿದರೆಂದು ಮಿಕ್ಕಾದ ತನ್ನ ಪರಿಸ್ಪಂದಿಗಳರಿದರೆಂದು ಇಂತೀ ಗುಣಕ್ಕೆ ಅನುಸರಣೆಯ ಮಾಡಿದೆನಾದಡೆ ಎನಗದೆ ಭಂಗ. ಇದಕ್ಕೆ ನೀ ಒಪ್ಪಿದಡೆ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವೆ ನೀ ತಪ್ಪಿದೆಯಾದಡೆ ನಿನಗೆ ಎಕ್ಕಲನರಕ.