Index   ವಚನ - 40    Search  
 
ಕೆರೆ ಪೂದೋಟ ಅರವಟ್ಟಿಗೆ ಬಾವಿ ವಿವಾಹ ಮುಂತಾದ ಧರ್ಮಂಗಳ ಕಟ್ಟಿಹೆವೆಂದು ನೇಮದಿಂದ ತಿರುಗುವ ಶೀಲ ಅದಾರಿಗೆ ಯೋಗ್ಯ? ಸರಿಹುದುಗಿನ ಸೂಳೆ ಸೀರೆಯನುಟ್ಟಂತೆ ಅದಾರಿಗೆ ಸುಖದುಃಖವೆಂಬುದ ನೀನೆ ಅರಿ. ಸರಿ ಹುದುಗಿನ ಧರ್ಮವುಂಟೆ? ಅರಿಕೆಯ ಒಡವೆಯ ಊರೆಲ್ಲಕ್ಕೆ ತಂದಿಕ್ಕಿ, ನಾ ಮಾಡಿದೆನೆಂದಡೆ ಇದಾರು ಮೆಚ್ಚುವರು? ಆ ಮಾಟವನಾರಯ್ಯಲಿಲ್ಲ, ಅದು ಸ್ವಕಾರ್ಯಕ್ಕೆ ಏರಿದ ಪಥ. ಇಂತೀ ವ್ರತ ನೇಮ ಶೀಲವನರಿಯಬೇಕು; ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ಧರ್ಮಜ್ಞನಾಗಿ ವ್ರತವನಂಗೀಕರಿಸಬೇಕು.