Index   ವಚನ - 42    Search  
 
ಖಂಡಿತಕಾಯಕದ ವ್ರತಾಂಗಿಯ ಮಾಟದ ಇರವೆಂತೆಂದಡೆ: ಕೃತ್ಯದ ನೇಮದ ಸುಯಿದಾನವ ಅಚ್ಚೊತ್ತಿದಂತೆ ತಂದು ಒಡೆಯರ ಭಕ್ತರ ತನ್ನ ಮಡದಿ ಮಕ್ಕಳು ಸಹಿತಾಗಿ ಒಡಗೂಡಿ, ಎಡೆಮಾಡಿ ಗಡಿಗೆ ಭಾಜನದಲ್ಲಿ ಮತ್ತೊಂದೆಡೆಗೆ, ಈಡಿಲ್ಲದಂತೆ, ಬಿಡುಮುಡಿಯನರಿಯದೆ, ಮತ್ತೆ ಇರುಳೆಡೆಗೆಂದಿರಿಸದೆ, ಹಗಲೆಡೆಯ ನೆನೆಯದೆ, ಇಂದಿಗೆ ನಾಳಿಗೆ ಎಂಬ ಸಂದೇಹಮಂ ಬಿಟ್ಟು ಮುಂದಣ ಕಾಯಕ ಅಂದಂದಿಗೆ ಉಂಟು ಎಂಬುದನರಿತು ಬಂದುದ ಕೂಡಿಕೊಂಡು ಲಿಂಗಾರ್ಚನೆಯ ಮಾಡಿ ಸದಾನಂದದಲ್ಲಿಪ್ಪ ಭಕ್ತನಂಗಳ ಮಂಗಳಮಯ ಕೈಲಾಸ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ಬೆಳಗು.