ಚಾಟಿ ಗುಂಡು ಬಂಧನ ಕಲಕೇತ ಯಾಚಕ
ಪಗುಡಿ ಪರಿಹಾಸಕಂಗಳಿಂದ ಬೇಡಿ ತಂದು
ಗುರುಲಿಂಗಜಂಗಮಕ್ಕೆ ಮಾಡಿಹೆನೆನಬಹುದೆ?
ಮಾಡುವ ಠಾವಿನಲ್ಲಿ, ಮಾಡಿಸಿಕೊಂಬವರಾರೆಂದು
ತಾನರಿದ ಮತ್ತೆ ಅಲ್ಲಿ ಬೇಡಬಹುದೆ?
ಭಕ್ತಿಯ ಮಾಡಿಹೆನೆಂದು ಕಾಡಬಹುದೆ?
ತಾ ದಾಸೋಹಿಯಾದ ಮತ್ತೆ ಅಲ್ಲಿಗೆ ತಾ ದಾಸನಾಗಿ
ಸಲ್ಲೀಲೆಯಿಂ ಪ್ರಸಾದವ ಕೊಂಡು
ಅಲ್ಲಿ ಇಲ್ಲಿ ಎಲ್ಲಿಯೂ ತಾನಾಗಿ ಇರಬೇಕಲ್ಲದೆ,
ಅಲ್ಲಿ ಮಾಡಿಹೆನೆಂದು ಎಲ್ಲರ ಬೇಡುವ ಕಲ್ಲೆದೆಯವನನೊಲ್ಲ,
ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಸಲ್ಲದ ನೇಮ.