Index   ವಚನ - 75    Search  
 
ಧೂಳುಪಾವಡವಾದಲ್ಲಿ ಆವ ನೀರನು ಹೊಯ್ಯಬಹುದು. ಕಂಠಪಾವಡದಲ್ಲಿ ಉರದಿಂದ ಮೀರಿ ಹೊಯ್ಯಲಾಗದು. ಸರ್ವಾಂಗಪಾವಡದಲ್ಲಿ ಹೊಳೆ ತಟಾಕ ಮಿಕ್ಕಾದ ಬಹುಜಲಂಗಳ ಮೆಟ್ಟಲಾಗದು.ಅದೆಂತೆಂದಡೆ: ಆ ಲಿಂಗವೆಲ್ಲವು ವ್ರತಾಚಾರ ಲಿಂಗವಾದ ಕಾರಣ. ತಮ್ಮ ಲಿಂಗದ ಮಜ್ಜನದ ಅಗ್ಗಣಿಯಲ್ಲದೆ ತಮ್ಮಂಗವ ಮುಟ್ಟಲಾಗದು. ಇಂತೀ ಇವು ತಾವು ಕೊಂಡ ವ್ರತದಂಗದ ಭೇದವಲ್ಲದೆ ನಾನೊಂದು ನುಡಿದುದಿಲ್ಲ.ಇದಕ್ಕೆ ನಿಮ್ಮ ಭಾವವೆ ಸಾಕ್ಷಿ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ವ್ರತದಂಗದ ಭೇದ.