Index   ವಚನ - 131    Search  
 
ವ್ರತವೆಂಬ ಸೀಮೆಯ ವಿವರವೆಂತುಟೆಂದಡೆ: ಬೀಗಿ ಬೆಳೆದ ಹೊಲಕ್ಕೆ ಬೇಲಿಯ ಕಟ್ಟಿದಡೆ ಚೇಗೆಯುಂಟೆ? ಹಾವ ಪಶುವಿಂಗೆ ಮಾಣಿಸಿದಡೆ ದೋಷ ಉಂಟೆ? ಗಾವಿಲಂಗೆ ಭಾವದ ಬುದ್ಧಿಯ ಹೇಳಿದವಂಗೆ ನೋವುಂಟೆ? ಬೇವ ನೋವ ಕಾಯಕ್ಕೆ ಜೀವವೆಂಬ ಬೆಳಗೇ ವ್ರತ. ಭಾವವೆಂಬ ಬೇಲಿಯ ಸಾಗಿಸಿಕೊಳ್ಳಿ. ಲೂಟಿಗೆ ಮೊದಲೆ ಬಸವ ಚೆನ್ನಬಸವಣ್ಣ ಪ್ರಭುದೇವ ಮೊದಲಾಗಿ ಶಂಕೆಗೆ ಮುನ್ನವೆ ಹೋದೆಹೆನೆಂಬ ಭಾವ ತೋರುತ್ತಿದೆ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಏಲೇಶ್ವರದ ಗೊತ್ತು ಕೆಟ್ಟಿತ್ತು.