Index   ವಚನ - 142    Search  
 
ಸಮಶೀಲಸಂಪಾದಕರು ಬಂದಿದ್ದಲ್ಲಿ ತಮ್ಮ ತಮ್ಮನೆಯಲ್ಲಿ ವಿಶೇಷ ದ್ರವ್ಯವ ಸಂಚವಿರಿಸಿ ಇದ್ದುದನಿದ್ದಂತೆ ಎಡೆಮಾಡೆಂದಡೆ ಬದ್ಧಕತನವಲ್ಲದೆ ಆ ವ್ರತ ನಿರ್ಧರವೆ? ಆ ಹರಶರಣರು ಮನೆಯಲ್ಲಿ ಬಂದಿರೆ ಅವರ ಮಲಗಿಸಿ, ತಾ ತನ್ನ ಸತಿಯ ನೆರೆದಡೆ, ಅವರ ನಿಲಿಸಿ ತಾ ಮತ್ತೊಂದಕ್ಕೆ ಹೋದಡೆ, ಶರಣಸಂಕುಳಕ್ಕೆ ಹೊರಗು, ಅವರಲ್ಲಿ ಮುಯ್ಯಾಂತು ಬೀಳ್ಕೊಂಡು ತನ್ನ ಸಂದೇಹ ಒಂದೂ ಇಲ್ಲದಂತೆ ಉಭಯವ ತಿಳಿದು ಮಾಡುವ ಮಾಟಕ್ಕೆ ಹಿಡಿದ ವ್ರತಕ್ಕೆಭಾವಶುದ್ಧವಾಗಿ ಇಪ್ಪುದು ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ವ್ರತಸಂಪಾದನೆ.