Index   ವಚನ - 143    Search  
 
ಸರಸಕ್ಕೆ ಸತ್ತವರುಂಟೆ? ವಿನೋದಕ್ಕೆ ಪಾರದ್ವಾರ ಉಂಟೆ? ಅರ್ತಿಯೆಂದು ಕಣ್ಣ ಕುತ್ತಿದಡೆ ಆ ಕೆಟ್ಟ ಕೇಡು ಅದಾರಿಗೆ ಪೇಳಾ? ಸತ್ಯನಾಗಿದ್ದು ಭಕ್ತರು ಜಂಗಮದಲ್ಲಿ ಚಚ್ಚಗೋಷ್ಠಿಯನಾಡುವ ಮಿಟ್ಟಿಯ ಭಂಡರಿಗೆ ಸತ್ಯಸದಾಚಾರ ಮುಕ್ತಿಭಾವ ಒಂದೂ ಇಲ್ಲ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಸಲ್ಲದ ನೇಮ.