Index   ವಚನ - 230    Search  
 
ನಾಲ್ಕುವೇದ, ಹದಿನಾರು ಶಾಸ್ತ್ರ, ಹದಿನೆಂಟು ಪುರಾಣ, ಇಪ್ಪತ್ತೆಂಟು ಆಗಮ, ಮೂವತ್ತೆರಡು ಉಪನಿಷತ್ತುಗಳೆಲ್ಲವೂ ಪಂಚಾಕ್ಷರದ ಸ್ವರೂಪವನರಿಯದೆ ನಿಂದವು. ಏಳುಕೋಟಿ ಮಹಾಮಂತ್ರಂಗಳಿಗೆ ತಾನೆ ಮೂಲಮಂತ್ರವಾಗಿ ಸುರತಿಗೆ ಅಣಿಮಾದಿಯ ಕೊಟ್ಟುಶರಣರಿಗೆ ತ್ರಿಣಯನ ಕೊಟ್ಟುದು ಈ ಪಂಚಾಕ್ಷರ ಪ್ರಣವದೊಳಡಕವಾದ ಪಂಚಾಕ್ಷರವನರಿತಲ್ಲಿ ಸೌರಾಷ್ಟ್ರ ಸೋಮೇಶ್ವರಲಿಂಗಸಂಜ್ಞೆಯ ವರ್ಣವೆನ್ನ ಸರ್ವಾಂಗದಲ್ಲಡಗಿದವಯ್ಯಾ.