ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ!
ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು,
`ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು,
ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ.
`ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನ ಡಲು
ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ
ನಿಮ್ಮ ಪಿಂಡ ಉದಯಿಸಿತ್ತು.
ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ?
ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ
ಕುರುಳು, ಮಲಮೂತ್ರ, ಕೀವು, ದುರ್ಗಂಧ,
ರಕ್ತ ಖಂಡಕಾಳಿಜ ಜಂತುಗಳೊಳಗೆ,
ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು
ನೀನಾವ ಕುಲ ಹೇಳಿರೆ?
ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ,
ಹೊಲೆ ಮುಂತಾಗಿ ಮುದುಡಿ ಬಿದ್ದಲ್ಲಿ,
ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು
ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ,
ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು
ನಿನ್ನಾವ ಕುಲ ಹೇಳಿರೆ?
ಮುಂಜಿಗಟ್ಟದ ಮುನ್ನ ಕೀಳುಜಾತಿ,
ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು
ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ?
ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ,
ತಲೆಕೆಳಗು ಮಾಡಿ ತೋರಿಹೆನು.
ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ?
ನಿಮ್ಮ ಪ್ರಾಣ ಬ್ರಹ್ಮನೊ? ಆವುದು ಬ್ರಾಹ್ಮಣ್ಯ?
ಬಲ್ಲಡೆ ಬಗುಳಿರಿ! ಅರಿಯದಿರ್ದಡೆ ಕೇಳಿರಿ.
ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ,
ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ.
ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ,
ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ?
ಅವಂತಿರಲಿ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ.
ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ.
ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ
ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು
ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ,
ಅವಕ್ಕೆ ಕುಲವಿಲ್ಲ. ನಿಲ್ಲು! ಮಾಣು!
ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು
ಮುನ್ನವೆ ದುರ್ವ್ಯಸನಂಗಳಾದ ಕಾರಣ,
ಅದಕೆಂದೂ ಕುಲವಿಲ್ಲ. ನಿಲ್ಲು! ಮಾಣು!
ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು
ನಿನ್ನ ಸುರೆಯ ಸವಿದ ಕೋಡಗದ ಹಾಂಗೆ
ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ.
ನಿಲ್ಲು! ಬಗುಳದಿರು!
ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ
ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು.
ಅವು ಕುಲವಿಲ್ಲ. ನಿಲ್ಲು! ಮಾಣು!
ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ?
ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ,
ಅವಕ್ಕೆ ಕುಲವಿಲ್ಲ ನಿಲ್ಲು! ಮಾಣು!
ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ.
ಅವ ನೀವು ಕಾಣಿರಿ, ನಿಮ್ಮನವು ಕಾಣವು.
ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ?
ಇಲ್ಲ! ಇಲ್ಲ!! ನಿಲ್ಲು! ಮಾಣು!
ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು
ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ.
ಅದೆಂತೆಂದಡೆ :
ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ|
ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ||
ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ!
ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು
ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ
ನಿಮ್ಮ ದೇಹ ಅಪವಿತ್ರ ಕಾಣಿರೆ!
ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ.
ಆ ಕಾರ್ಯಕ್ಕೆ ಕುಲವುಂಟೆಂದಡೆ
ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ
ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು!
ಅಂಥಾ ಗುಣ ನಿಮಗಿಲ್ಲವಾಗಿ,
ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ
ನಿಮಗೆ ಕುಲವಿಲ್ಲ! ನಿಲ್ಲು! ಮಾಣು!
ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ
ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು,
ಆವ ಕುಲದೊಳಗೂ ಅಲ್ಲ.
ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ:
ಭೂದೇವಮೃದ್ಭಾಂಡಮನೇಕ ರೂಪಂ
ಸುವರ್ಣಮೇಕಂ ಬಹುಭೂಷಣಾನಾಂ|
ಗೋಕ್ಷೀರಮೇಕಂ ಬಹುವರ್ಣಧೇನುಃ|
ಶರೀರಭೇದಸ್ತ್ವೇಕಃ ಪರಮಾತ್ಮಾ||
ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ.
ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ.
ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ?
ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು,
ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ?
ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ|
ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ||
ಎಂಬ ಶ್ರುತಿಯಂ ತಿಳಿದು ನೋಡಲು,
ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು,
ನಿಮಗೆಲ್ಲಿಯ ಉತ್ತಮ ಕುಲ?
ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ
ನಿಮಗೆ ಉತ್ತಮ ಕುಲ ಉಂಟಾದಡೆ,
ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ!
ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ
ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ?
ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ.
ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ
ಸಕಲ ಜೀವರಾಶಿ ಎಲ್ಲಾ ಉದಯಿಸಿದವು.
ಅದೆಂತೆಂದಡೆ:
ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ|
ಅಂತ್ಯಜಾತಿರ್ದ್ವಿಜಾತಿರ್ಯಾ ಏಕಯೋನಿಸಹೋದರಾ||
ಎಂದುದಾಗಿ,
ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು
ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ,
ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು,
ನಿಮಗೆಲ್ಲಿಯ ಕುಲವೊ?
ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು
ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ
ಶ್ವಪಚೋsಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ|
ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ||
ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ,
ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು,
ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ.
ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ.
ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದ್ದಾವೆ.
ಅದೆಂತೆಂದಡೆ:
ಆಹಾರನಿದ್ರಾಭಯಮೈಥುನಂ ಚ
ಸಾಮಾನ್ಯಮೇತತ್ಪಶುಭಿರ್ನರಾಣಾಂ|
ಜ್ಞಾನಂ ಹಿ ತೇಷಾಂ ಅಧಿಕೋ ವಿಶೇಷಃ
ಜ್ಞಾನೇನ ಹೀನಾಃ ಪಶುಭಿಃ ಸಮಾನಾಃ||
ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು.
ನಿಮಗೆಲ್ಲಿಯದೊ ಸತ್ಕುಲ?
ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು.
ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ,
ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ.
ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ.
ಅವರೆಲ್ಲಾ ಕೀಳುಜಾತಿಗಳಾದ ಕಾರಣ,
ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ.
ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ.
ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ.
ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ
ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು,
ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು.
ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ,
ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ,
ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು.
ಹೇಗಾದಡೂ ಅನುಸರಿಸಿಕೊಳಬಹುದು.
ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ
ಮುಡುಹಂ ಸುಡಿಸಿಕೊಂಡು,
ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ,
ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು.
ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು.
ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು.
ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು.
ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು.
ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು.
ನಿಮ್ಮ ಮುಖವ ನೋಡಲಾಗದು.
ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ.
ಬ್ರಹ್ಮವೆಂತಿಪ್ಪುದೆಂದರಿಯಿರಿ.
ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ?
ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ|
ಸರ್ವಜೀವದಯಾಬ್ರಹ್ಮ ಇತ್ಯೈದ್ಬ್ರಹ್ಮ ಲಕ್ಷಣಂ|
ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ|
ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ