Index   ವಚನ - 2    Search  
 
ಎರಳೆ ಯತಿಯಂತೆ, ಕಾಕ ಪಿಕದಂತಿರಬೇಡವೆ? ತಿಟ್ಟನೆ ತಿರುಗಿ, ತೊಟ್ಟನೆ ತೊಳಲಿ ಬಳಲುವರ ಕಳ ಹೇಸಿಕೆಯ ನೋಡಾ! ಇರುಳು ಹಗಲೆನ್ನದೆ ತಿರುಗುವವರ ಕಂಡು ಹೇಸಿದೆ. ಅರಿದಡೆ ಶರಣ, ಮರೆದಡೆ ಮಾನವ. ಸತ್ತ ಕಸನ ಹೊತ್ತುಕೊಂಡು ಊರೂರಿಗೆ ಮಾರುವ ಕಾಶಾಂಬರಧಾರಿಗಳನೊಲ್ಲ, ನಿಜಗುರು ಶಂಕರದೇವ.