Index   ವಚನ - 3    Search  
 
ಕಾಯದ ಮದವಳಿದಲ್ಲದೆ ಮಾಯಾವಿಕಾರವಳಿಯದು. ಮಾಯಾವಿಕಾರವಳಿದಲ್ಲದೆ ಭವನಾಶವಾಗದು. ಭವನಾಶವಾದಲ್ಲದೆ ಲಿಂಗಸಂಬಂಧವಳವಡದು. ಲಿಂಗಸಂಬಂಧವಳವಟ್ಟಲ್ಲದೆ ಸುಖವು ಸಾಧ್ಯವಾಗದು. ಪರಮಸುಖ ಪರಿಣಾಮಕ್ಕೆ ಮಹಾನುಭಾವಿಗಳ ಸಂಗವೇ ಬೇಕು. ಮಹಾನುಭಾವಿಗಳ ಸಂಗದಿಂದಲ್ಲದೆ ವಿಶ್ರಾಮವಿಲ್ಲ. ಇಂತಪ್ಪ ಮಹಾನುಭಾವದ ಮೂರ್ತಿ ಸಂಗನ ಬಸವಣ್ಣನ ಕೃಪೆಯಿಂದಲೆನಗೆ ನಿಜವು ಕಾಣಬಂದಿತ್ತು. ಇದು ಕಾರಣ, ನಿಜಗುರು ಶಂಕರದೇವರ ಶರಣ ಪ್ರಭುದೇವರ ಶ್ರೀಪಾದವ ಕಂಡು ನಿಶ್ಚಿಂತನಾದೆನಯ್ಯಾ.