Index   ವಚನ - 10    Search  
 
ಸ್ತ್ರೀಲಿಂಗ ನಾಸ್ತಿಯಾಗಿರಬೇಕು ಗುರುವಿನಿರವು. ಪುಲ್ಲಿಂಗ ನಾಸ್ತಿಯಾಗಿರಬೇಕು ಲಿಂಗದಿರವು. ನಪುಂಸಕಲಿಂಗ ನಾಸ್ತಿಯಾಗಿರಬೇಕು ಜಂಗಮದಿರವು. ತ್ರಿವಿಧ ಬಿಂದು ಲಿಂಗ ನಾಸ್ತಿ. ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು, ನಾದ ಬಿಂದು ಕಳೆಗೆ ಹೊರಗಾಯಿತ್ತು.