Index   ವಚನ - 22    Search  
 
ರಸವನರಿವುದಕ್ಕೆ ಜಿಹ್ವೆಯಾಗಿ ಬಂದು, ಗಂಧವನರಿವುದಕ್ಕೆ ನಾಸಿಕವಾಗಿ ಬಂದು, ರೂಪವನರಿವುದಕ್ಕೆ ಅಕ್ಷಿಯಾಗಿ ಬಂದು, ಶಬ್ದವನರಿವುದಕ್ಕೆ ಶ್ರೋತ್ರವಾಗಿ ಬಂದು, ಸ್ಪರುಶನವನರಿವುದಕ್ಕೆ ತ್ವಕ್ಕಾಗಿ ಬಂದು, ಇಂತೀ ಘಟದ ಮಧ್ಯದಲ್ಲಿ ನಿಂದು ಪಂಚವಕ್ತ್ರನಾದೆಯಲ್ಲಾ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವೆ.