Index   ವಚನ - 49    Search  
 
ಪಿಪೀಲಿಕ ಮಧುರವ ಕಾಂಬಂತೆ, ಮರ್ಕಟ ಲಂಘನವ ಕಾಂಬಂತೆ, ವಿಹಂಗ ಆಕಾಶವನಡರುವಂತೆ, ತ್ರಿವಿಧದ ಭೇದದ ಜ್ಞಾನವನರಿತು, ಕಾಯಬಿಂದು, ಜೀವಬಿಂದು, ಜ್ಞಾನಬಿಂದು, ತ್ರಿವಿಧ ಬಿಂದುವಿನಲ್ಲಿ ನಿಂದು ಕಂಡು, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗದಲ್ಲಿ, ಸ್ವಯಂಭುವನರಿಯಬೇಕು.