Index   ವಚನ - 125    Search  
 
ಪಾತಕ ಹೊಲೆಯೆಂದರಿದು ಬಿಟ್ಟಲ್ಲಿ, ಮತ್ತಾ ಗುಣ ಸ್ವೀಕರಿಸಬಹುದೆ? ಇವೆಲ್ಲ ಅಲ್ಲಾ ಎಂದು ಬಲ್ಲತನವ ತಾನರಿದು, ಮತ್ತೆಲ್ಲರಲ್ಲಿ ಬೆರಸಬಹುದೆ? ಒಡೆದ ಹಂಚಿಂಗೆ, ಹಿಡಿದು ಬಿಟ್ಟ ವ್ರತಕ್ಕೆ, ಮತ್ತಿವ ಒಡಗೂಡಬಹುದೆ? ಇಂತೀ ಬಿಡುಗಡೆಯನರಿದಲ್ಲಿ, ಅನುಸರಣೆಯ ಮಾಡಿದಡೆ, ಎನ್ನೊಡೆಯ ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವಾದ