Index   ವಚನ - 64    Search  
 
ಜಗವನೊಳಕೊಂಡ ಲಿಂಗವು ಸೊಗಸಿಂದೆ ಎನ್ನ ಕರಸ್ಥಲಕ್ಕೆ ಬಂದಿರಲು, ಕಂಡು ಹಗರಣವಾಯಿತ್ತೆನಗೆ. ಗುರುಲಿಂಗಜಂಗಮಸ್ವರೂಪವಾಗಿ ಮೂರ್ತಿಗೊಂಡಿತ್ತು ನೋಡಾ. ಆಹಾ ಎನ್ನ ಪುಣ್ಯವೇ! ಆಹಾ ಎನ್ನ ಭಾಗ್ಯವೇ! ಆಹಾ ಅಖಂಡೇಶ್ವರಾ, ನಿಮ್ಮ ಘನವ ಕಂಡು ಎನ್ನ ಮನಕ್ಕೆ ಮಂಗಳವಾಯಿತ್ತು ನೋಡಾ.