Index   ವಚನ - 128    Search  
 
ಗಾಳಿ ಬೀಸುವ ವೇಳೆಯಲ್ಲಿ ತೂರಿಕೊಳ್ಳಿರೋ ಬೇಗ ಬೇಗ! ಗಾಳಿ ನಿಮ್ಮಿಚ್ಛೆಯಲ್ಲ ಕೇಳಿರೋ ಜಾಳಮನುಜರಿರಾ. ಅಂಗಕ್ಕೆ ಅಳಿವು ಬರುವುದು ದೂರವಿಲ್ಲ ನೋಡಿರೋ. ತ್ವರಿತಂ ಜೀವಿತಂ ಯಾತಿ ತ್ವರಿತಂ ಯಾತಿ ಯೌವನಮ್ | ತ್ವರಿತಂ ಯಾತಿ ಪ್ರಖ್ಯಾತಿಃ ತಸ್ಮಾತ್ಪೂಜಯ ಶಂಕರಮ್ ||'' ಇದನರಿದು ಬೇಗ ಬೇಗ ಲಿಂಗವ ಪೂಜಿಸಿರೊ! ಬೇಗ ಬೇಗ ಜಂಗಮವನೊಲಿಸಿರೋ! ಅರುವುಳ್ಳ ಕಾಲಕ್ಕೆ ಬೇಗ ಬೇಗ ನಮ್ಮ ಅಖಂಡೇಶ್ವರಲಿಂಗವ ಕೂಡಿರೋ.