ಹಿಂದಣ ಜನ್ಮದಲ್ಲಿ ಗುರುಲಿಂಗಜಂಗಮವ
ಶಿವನೆಂದರಿದು ನಂಬಿ ಪೂಜಿಸಿದ ಕಾರಣ
ಮುಂದೆ ಹುಟ್ಟುವನು ಸತ್ಕುಲಜ ಬಲವಂತನಾಗಿ,
ಧನಧಾನ್ಯ ಸಕಲ ಭೋಗೈಶ್ವರ್ಯ ಉಳ್ಳವನಾಗಿ,
ಸಕಲಲೋಕಕ್ಕೆ ಮನ್ನಣೆ ಉಳ್ಳವನಾಗಿ,
ವಿದ್ಯೆಬುದ್ಧಿಯಲ್ಲಿ ವಿಶೇಷನಾಗಿ,
ಸತ್ಯ ಸದಾಚಾರ ಭಕ್ತಿಜ್ಞಾನ ಉಳ್ಳವನಾಗಿ,
ನಮ್ಮ ಅಖಂಡೇಶ್ವರನ
ಪೂರ್ಣ ಒಲುಮೆ ಉಳ್ಳವನಾಗಿರ್ಪನು ನೋಡಿರೋ.