Index   ವಚನ - 162    Search  
 
ಹರಹರಾ, ಎನ್ನ ಬಡಮನದ ಅಳಿಯಾಸೆಯ ನೋಡಾ! ಸುರಧೇನುವಿದ್ದು ಬರಡಾಕಳಿಗೆ ಆಸೆಮಾಡುವಂತೆ, ಕಲ್ಪವೃಕ್ಷವಿದ್ದು ಕಾಡಮರಕ್ಕೆ ಕೈಯಾನುವಂತೆ, ಚಿಂತಾಮಣಿಯಿದ್ದು ಗಾಜಿನಮಣಿಯ ಬಯಸುವಂತೆ, ಎನ್ನ ಕರ ಮನ ಭಾವದಲ್ಲಿ ನೀವು ಭರಿತರಾಗಿರ್ದುದ ಮರೆತು ನರರಿಗಾಸೆಯ ಮಾಡಿ ಕೆಟ್ಟೆನಯ್ಯ ಅಖಂಡೇಶ್ವರಾ.