Index   ವಚನ - 196    Search  
 
ಉಪಾಧಿಯನಳಿದು, ನಿರುಪಾಧಿಯ ತಿಳಿದು, ಸಹಜಮಾಟದಲ್ಲಿ ಸುಳಿದು, ಜಾತಿಸೂತಕ ಪ್ರೇತಸೂತಕ ಜನನಸೂತಕ ಉಚ್ಚಿಷ್ಟಸೂತಕ ರಜಸ್ಸೂತಕವೆಂಬ ಪಂಚಸೂತಕಂಗಳ ಕಳೆದು, ಸದಾಚಾರ ಲಿಂಗಾಚಾರ ಶಿವಾಚಾರ ಗಣಾಚಾರ ಭೃತ್ಯಾಚಾರವೆಂಬ ಪಂಚಾಚಾರಂಗಳಳವಟ್ಟು ಪಂಚಭೂತಂಗಳ ಪರಿಹರಿಸಿ, ಪಂಚಪ್ರಾಣವಾಯುಗಳ ಸಂಚಲಗುಣವಳಿದು ಪಂಚೇಂದ್ರಿಯಂಗಳಲ್ಲಿ ಪಂಚಲಿಂಗಂಗಳ ಪ್ರತಿಷ್ಠಿಸಿ, ಪಂಚಬ್ರಹ್ಮದ ಮೂಲವನರಿದು, ಮೂಲೋಕದೊಡೆಯನಲ್ಲಿ ಮನವಡಗಿರ್ಪ ಮಹಾಶರಣರ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯ ಅಖಂಡೇಶ್ವರಾ.