Index   ವಚನ - 268    Search  
 
ಶರಣಭರಿತ ಶಿವನು ಶಿವಭರಿತ ಶರಣನೆಂಬುದು ನಿಜವಲ್ಲದೆ, ಜಗಭರಿತ ಶಿವನು ಶಿವಭರಿತ ಜಗವೆಂಬುದು ಹುಸಿ ನೋಡಾ! ಅದೇನು ಕಾರಣವೆಂದೊಡೆ: ಜಗಕ್ಕೆ ಪ್ರಳಯ ಮಹಾಪ್ರಳಯಂಗಳುಂಟು. ಇದು ಕಾರಣ, ಪ್ರಳಯಾತೀತ ಶರಣಸನ್ನಿಹಿತ ನಮ್ಮ ಅಖಂಡೇಶ್ವರ.