Index   ವಚನ - 275    Search  
 
ಹರಿ ಹರಗೆ ಸರಿಯೆಂಬ ಎಲೆ ನೀಚ ಪರವಾದಿಗಳಿರಾ ನೀವು ಕೇಳಿರೊ. ಹರಿ ಹತ್ತು ಭವದಲ್ಲಿ ಹುಟ್ಟಿ ಬಂದು ನಮ್ಮ ಹರನ ಶ್ರೀಚರಣವನರ್ಚಿಸಿ ವರವ ಪಡೆದನಲ್ಲದೆ ನಮ್ಮ ಹರನು ಆವ ಭವದಲ್ಲಿ ಹುಟ್ಟಿದ? ಆವ ದೇವರ ಪೂಜಿಸಿ ಆವ ಆವ ಫಲಪದವ ಪಡೆದನು ಬಲ್ಲರೆ ನೀವು ಹೇಳಿರೊ? ಇದನರಿಯದೆ ಹರಿ ಹರಗೆ ಸರಿಯೆಂಬ ಪರವಾದಿಗಳ ಬಾಯ ಕೆರಹಿನಟ್ಟೆಯಲ್ಲಿ ಹೊಯ್ದಲ್ಲದೆ ಎನ್ನ ಸಿಟ್ಟು ಮಾಣದು ನೋಡಾ ಅಖಂಡೇಶ್ವರಾ.