Index   ವಚನ - 409    Search  
 
ಪವನವೆ ಅಂಗವಾದ ಪ್ರಾಣಲಿಂಗಿಗೆ ಸುಮನವೆ ಹಸ್ತ; ಆ ಹಸ್ತಕ್ಕೆ ಆದಿಶಕ್ತಿ, ಆ ಶಕ್ತಿಗೆ ಜಂಗಮಲಿಂಗ, ಆ ಲಿಂಗಕ್ಕೆ ತ್ವಗಿಂದ್ರಿಯವೆ ಮುಖ, ಆ ಮುಖಕ್ಕೆ ಸ್ಪರ್ಶನಪದಾರ್ಥ; ಆ ಪದಾರ್ಥವನು ತ್ವಕ್ಕಿನಲ್ಲಿಹ ಜಂಗಮಲಿಂಗಕ್ಕೆ ಅನುಭಾವಭಕ್ತಿಯಿಂದರ್ಪಿಸಿ, ಆ ಸುಸ್ಪರ್ಶನ ಪ್ರಸಾದವನು ಪಡೆದು ಸುಖಿಸುವಾತನೆ ಪ್ರಾಣಲಿಂಗಿಯಯ್ಯಾ ಅಖಂಡೇಶ್ವರಾ.