Index   ವಚನ - 494    Search  
 
ಇನ್ನು ಧಾರಣಯೋಗದ ಲಕ್ಷಣವೆಂತೆನೆ: ಸಂಕಲ್ಪ ವಿಕಲ್ಪಾತ್ಮಕವಾದ ಮನಸ್ಸು ಕಾಕಾಕ್ಷಿಯಂತೆ ಬಾಹ್ಯಾಭ್ಯಂತರಗಳಿಗೆ ತಾನೇ ಕಾರಣವಪ್ಪುದರಿಂದೆ ಆ ಮನಮಂ ಮುದ್ರಾಕರಣಬಂಧಂಗಳಿಂದಂತರ್ಮುಖಮಂ ಮಾಡಿ, ಅನವಚ್ಛಿನ್ನ ತೈಲಧಾರೆಯಂತೆ ಶಿವಧ್ಯಾನಮಂ ಮಾಡುತಿರಲು ಆ ಧ್ಯಾನಾಕಾರದಿಂ ಕರಿಗೊಂಡ ವಸ್ತುವಿನೊಳು ಆ ಮನವು ನಿಶ್ಚಲಮಾಗಲದೇ ಧಾರಣಯೋಗ ನೋಡಾ ಅಖಂಡೇಶ್ವರಾ.