Index   ವಚನ - 606    Search  
 
ಅಗ್ನಿಯ ಸಂಗದಿಂದ ಕಾನನ ಕೆಟ್ಟಂತೆ, ಜ್ಯೋತಿಯ ಸಂಗದಿಂದ ಕತ್ತಲೆ ಕೆಟ್ಟಂತೆ, ಪರುಷದ ಸಂಗದಿಂದ ಕಬ್ಬಿಣ ಕೆಟ್ಟಂತೆ, ಲಿಂಗಾನುಭಾವಿಗಳ ಸಂಗದಿಂದೆ ಎನ್ನ ಹುಟ್ಟು ಹೊಂದುಗಳು ನಷ್ಟವಾಗಿ ಕೆಟ್ಟುಹೋದುವು ನೋಡಾ ಅಖಂಡೇಶ್ವರಾ.