Index   ವಚನ - 2    Search  
 
ಅಂಗದ ಗುಣವಳಿದು ಲಿಂಗಾಗಿಯಾದ ನಿಜಶರಣನು, ಜಗದ ಠಕ್ಕರಾದ ಜಂಗುಳಿಗಳ ಬಾಗಿಲುಗಳಿಗೆ ಹೋಗನು ನೋಡ. ಹೋದಡೆ ಗುರುವಾಕ್ಯವಿಡಿದು ಹೋಗಿ, `ಲಿಂಗಾರ್ಪಿತ ಭಿಕ್ಷಾ' ಎಂದು ಭಿಕ್ಷವ ಬೇಡಿ, ಲಿಂಗಾಣತಿಯಿಂದ ಬಂದ ಭಿಕ್ಷವ, ಲಿಂಗ ನೆನಹಿನಿಂದ ಲಿಂಗನೈವೇದ್ಯವಾಗಿ ಕೈಕೊಂಡು, ಬಂದಬಂದ ಸ್ಥಲವನರಿದು, ಲಿಂಗಾರ್ಪಿತವ ಮಾಡಬೇಕು. ಅದೆಂತೆಂದಡೆ: ರಾಜಾನ್ನಂ ನರಕಶ್ಚೈವ ಸೂತಕಾನ್ನಂ ತಥೈವ ಚ | ಮೃತಾನ್ನಂ ವರ್ಜಯೇತ್ ಜ್ಞಾನೀ ಭಕ್ತಾನ್ನಂ ಭುಂಜತೇ ಸದಾ || ಇಂತೆಂದುದಾಗಿ, ಲಿಂಗಾಂಗಿಗೆ, ಲಿಂಗಾಭಿಮಾನಿಗೆ, ಲಿಂಗಪ್ರಾಣಿಗೆ ಇದೇ ಪಥವಯ್ಯಾ, ಸಕಳೇಶ್ವರದೇವಾ ನಿಮ್ಮಾಣೆ.