Index   ವಚನ - 14    Search  
 
ಅಷ್ಟವಿಧಾರ್ಚನೆ ಷೋಡಶೋಪಚಾರಂಗಳ ಮಾಡುವ ಮಿಟ್ಟೆಯಭಂಡರ ಕಂಡು, ನಾಚಿತ್ತೆನ್ನ ಮನ. ಉಪಚಾರವೇಕೊ ಶಿವಲಿಂಗದ ಕೂಡೆ ಶ್ವಪಚರಿಗಲ್ಲದೆ? ಸಕಳೇಶ್ವರಯ್ಯಾ, ಇಂತಪ್ಪ ಮಾದಿಗ ವಿದ್ಯಾಭ್ಯಾಸದವರನೊಲಿಯಬಲ್ಲನೆ?