Index   ವಚನ - 50    Search  
 
ಕುರುಹಿನ ರೂಹಿನ ಕೈಯಲ್ಲಿ ದರ್ಪಣವಿದ್ದಲ್ಲಿ ಫಲವೇನು? ಒಂದಕ್ಕೆ ಜೀವವಿಲ್ಲ, ಒಂದಕ್ಕೆ ತೇಜವಿಲ್ಲ. ಕಾರಣವರಿಯದ ನಿಃಕಾರಣ ಮನುಜರ ಕೈಯಲ್ಲಿ ಲಿಂಗವಿದ್ದು ಫಲವೇನು? ಅಂಗರಹಿತವಾದ ಸಂಗವನರಿಯರು. ಸಂಗರಹಿತವಾದ ಸುಖವನರಿಯರು. ನಿಸ್ಸಂಗಿ ನಿಂದ ನಿಲವ, ಸಕಳೇಶ್ವರದೇವಾ, ನಿಮ್ಮ ಶರಣ ಬಲ್ಲ.