Index   ವಚನ - 60    Search  
 
ಜ್ಯೋತಿ ಸೋಂಕಿದ ಬತ್ತಿಯೆಲ್ಲ ಜ್ಯೋತಿಯಪ್ಪವಯ್ಯಾ. ಸಾಗರವ ಮುಟ್ಟಿದ ನದಿಗಳೆಲ್ಲ ಸಾಗರವಪ್ಪವಯ್ಯಾ. ಪ್ರಸಾದವ ಮುಟ್ಟಿದ ಪದಾರ್ಥಂಗಳೆಲ್ಲ ಪ್ರಸಾದವಪ್ಪವಯ್ಯಾ. ಲಿಂಗವ ಮುಟ್ಟಿದ ಅಂಗವೆಲ್ಲ ಲಿಂಗಾಂಗವಪ್ಪವಯ್ಯಾ. ಸಕಳೇಶ್ವರದೇವಯ್ಯಾ, ನಿಮ್ಮ ಮುಟ್ಟಿದವರೆಲ್ಲ ನಿಮ್ಮಂತೆ ಅಪ್ಪರಯ್ಯಾ.