Index   ವಚನ - 63    Search  
 
ದಾಸ ವಸ್ತ್ರವನಿತ್ತ ಠಾವು ಲೇಸಾಯಿತ್ತು. ತವನಿಧಿಯ ಪಡೆದ ಠಾವು ಹೊಲ್ಲೆಹವಾಯಿತ್ತು. ಸಿರಿಯಾಳ ಮಗನನಿತ್ತ ಠಾವು ಲೇಸಾಯಿತ್ತು. ಮರಳಿ ಬೇಡಿದ ಠಾವು ಹೊಲ್ಲೆಹವಾಯಿತ್ತು. ಬಲ್ಲಾಳ ವಧುವಿನಿತ್ತ ಠಾವು ಲೇಸಾಯಿತ್ತು. ಸ್ವಯಲಿಂಗವಾದ ಠಾವು ಹೊಲೆಹವಾಯಿತ್ತು. ಇವರೆಲ್ಲರೂ ಸಕಳೇಶ್ವರದೇವರಲ್ಲಿ ಅಪೇಕ್ಷಿತರಲ್ಲದೆ, ನಿರಪೇಕ್ಷಿತರಾರೂ ಇಲ್ಲ .