Index   ವಚನ - 88    Search  
 
ಬಸವಣ್ಣನ ಭಕ್ತಿಪ್ರಸಾದವ ಕೊಂಡೆನಯ್ಯಾ. ಚೆನ್ನಬಸವಣ್ಣನ ಜ್ಞಾನಪ್ರಸಾದವ ಕೊಂಡೆನಯ್ಯಾ. ಪ್ರಭುದೇವರ ಬಯಲಪ್ರಸಾದವ ಕೊಂಡೆನೆಯ್ಯಾ. ಮಡಿವಾಳಯ್ಯನ ಕರುಣಪ್ರಸಾದವ ಕೊಂಡೆನಯ್ಯಾ. ಸಿದ್ಧರಾಮಯ್ಯನ ನಿರ್ಮಲಪ್ರಸಾದವ ಕೊಂಡೆನಯ್ಯಾ. ಮರುಳಶಂಕರದೇವರ ಪ್ರಸನ್ನ ಪ್ರಸಾದವ ಕೊಂಡೆನಯ್ಯಾ. ಏಳ್ನೂರೆಪ್ಪತ್ತುಮರಗಣಂಗಳ ಪರಮಪ್ರಸಾದವ ಕೊಂಡು. ಬದುಕಿದೆನಯ್ಯಾ, ಸಕಳೇಶ್ವರಾ.