Index   ವಚನ - 97    Search  
 
ಮೆಕ್ಕೆ ಮಿನಿಕೆ ಮೊದಲಾಗಿ ಅವು ಪಕ್ವಕ್ಕೆ ಬಂದಡೆ, ವಿಷ ಬಿಡುವುದೆ? ಸೋರೆ ವಾರಿಧಿ ಫಣಿ ಅವು ಹರೆಯ ಹಿರಿದಾದಡೆ, ಮನದ ವಿಷ ಬಿಡದು. ಸಕಳೇಶ್ವರದೇವಾ, ನಿಮ್ಮ ನಿಜವನರಿಯದ ಮನುಜಂಗೆ, ನರೆ ಹಿರಿದಾದಡೇನು, ಮನದ ಅವಗುಣ ಬಿಡದು.