Index   ವಚನ - 98    Search  
 
ಮೆಳೆಯ ಮೇಲೆ ಕಲ್ಲನಿಕ್ಕಿದಡೆ, ಮೆಳೆ ಭಕ್ತನಾಗಬಲ್ಲುದೆ? ಮೇಹನಿಕ್ಕಿ ಮೆಯ್ಯನೊರಸಿದಡೆ, ಪಶುಗಳೆಲ್ಲ ಮೆಚ್ಚುವವು. ಅನ್ನವನಿಕ್ಕೆ ಹಿರಣ್ಯವ ಕೊಟ್ಟಡೆ, ಜಗವೆಲ್ಲ ಹೊಗಳುವುದು. ಒಳಗನರಿದು, ಹೊರಗೆ ಮರೆದವರ ಎನಗೆ ತೋರಿಸಾ, ಸಕಳೇಶ್ವರದೇವಾ.