Index   ವಚನ - 103    Search  
 
ಲಲಾಟದೊಳಗಣ ಅಸ್ಥಿಯ ಬೆಳ್ಪು ವಿಭೂತಿ. ಚರ್ಮದೊಳಗಣ ಕೆಂಪು ಕಿಸುಕಾಶಾಂಬರ. ವ್ಯಾಕುಳವಿಲ್ಲದುದೆ ಲಾಕುಳ, ಮಹಾದೇವರ ನೆನೆವುದೆ ಆಧಾರ. ನಿರ್ಮೋಹತ್ವಂ ಚ ಕೌಪೀನಂ ನಿಸ್ಸಂಗತ್ವಂ ಚ ಮೇಖಳಂ | ಶಾಂತಿ ಯಜ್ಞೋಪವೀತಂ ಚ ಆಭರಣಂ ದಯಾಪರಂ | ಪಂಚೇಂದ್ರಿಯ ವೀಣಾದಂಡಂ ಪಂಚಮುದ್ರಾಃ ಪ್ರಕೀರ್ತಿತಂ | ಮಹಾಲಿಂಗ ಧ್ಯಾನಾಧಾರಂ ಶಿವಯೋಗಿ ಚ ಲಕ್ಷಣಂ | [ಎಂಬುದಾಗಿ], ತುರುಬಿನ ತಪಸಿಯ ಪೆರರೆತ್ತ ಬಲ್ಲರು? ಸಕಳೇಶ್ವರದೇವಾ, ನೀನೆ ಬಲ್ಲೆ.