Index   ವಚನ - 16    Search  
 
ಅಲ್ಲಿಂದತ್ತ ಪಶ್ಚಿಮ ಚಕ್ರಕ್ಕೆ ಏಕದಳ ಪದ್ಮ, ಹವಣಿಸಬಾರದ ತೇಜ, ಏಕಾಕ್ಷರ, ಕುರುಹಿಡಬಾರದ ನಾದ, ಅಪ್ರದರ್ಶನ ವರ್ಣ, ನಿರ್ಭಿನ್ನ ಶಕ್ತಿ, ಸರ್ವಾತ್ಮನೆಂಬ ಜಂಗಮವೆ ಅಧಿದೇವತೆ. ಪರಿಪೂರ್ಣ ಜಂಗಮಲಿಂಗ, ಅಕ್ಷರಾಕ್ಷ[ರ]ತೀತ, ನಿಶ್ಶಬವಾಗಿಪ್ಪುದು. ಇಂತಪ್ಪ ಲಿಂಗಾಂಗವೆ ತಾನಾಗಿ, ಅವಿರಳ ಜಂಗಮಭಕ್ತಿಯ ಮಾಡಬಲ್ಲಾತನೆ, ಬಸವಪ್ರಿಯ ಕೂಡಲಚೆನ್ನಸಂಗಯ್ಯನಲ್ಲಿ ಸಂಗನಬಸವಣ್ಣನಯ್ಯಾ, ಪ್ರಭುವೆ.