Index   ವಚನ - 52    Search  
 
ನಿಮ್ಮ ತನು, ನಿಮ್ಮ ಧನ, ನಿಮ್ಮ ಮನ ನಿಮ್ಮದಲ್ಲದೆ ಅನ್ಯವೆಂದಣುಮಾತ್ರವಿಲ್ಲ ನೋಡಯ್ಯಾ. ಭಕ್ತನ ಮಠವೆ ತನ್ನ ಮಠವೆಂದು ಮುನ್ನವೆ ಅರಿದರಿದು ಬಂದು, ಮತ್ತೊಂದ ಮತ್ತೊಂದ ನೆನೆವರೆ? ಬಸವಪ್ರಿಯ ಕೂಡಲಚೆನ್ನಸಂಗನ ಶರಣ ಬಸವಣ್ಣಂಗೆ ಸ್ವತಂತ್ರಭಾವವುಳ್ಳಡೆ ನಿಮ್ಮ ಪಾದದಾಣೆ.