Index   ವಚನ - 67    Search  
 
ಮನವೆಂಬ ವಿಧಾಂತನು ಕಾಯವೆಂಬ ಕಣೆಯ ನೆಟ್ಟು, ನಾನಾ ಬಹುವಿಷಯಂಗಳೆಂಬ ಸುತ್ತ ನೇಣ ಕಟ್ಟಿ, ನೋಡುವ ಕರಣಂಗಳು ಮೆಚ್ಚುವಂತೆ ಕಾಮದ ಕತ್ತಿಯ ತಪ್ಪಿ, ಕ್ರೋಧದ ಇಟ್ಟಿಯ ತಪ್ಪಿ, ಮೋಹದ ಕಠಾರಿಯ ತಪ್ಪಿ, ಮೆಟ್ಟಿದ ಮಿಳಿಗೆ ತಪ್ಪದೆ ಲೆಂಗಿಸಿ, ಸುತ್ತಣ ಕೈದ ತಪ್ಪಿಸಿ, ಚಿತ್ತ ಅವಧಾನವೆಂದು ಹಾಯ್ದುಳಿದು, ಮನವೆಂಬ ವಿಧಾಂತನಾಡಿ,