Index   ವಚನ - 91    Search  
 
ಹೊಯಿದಡೆ ಅಂಗದ ಮೇಲಣ ನೋವ, ಮನವರಿವಂತೆ, ಬಾಹ್ಯ ಉಪಚರಣೆಯ ಪೂಜೆ, ನಿನಗೆ ಹೊರಗಾದುದುಂಟೆ? ಆ ತೆರನನರಿ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು, ಒಳಗೂ ತಾನೆ, ಹೊರಗೂ ತಾನೆ.