Index   ವಚನ - 8    Search  
 
ಉದಕದೊಳಗಣ ಕಿಚ್ಚಿನಂತೆ ಲಿಂಗೈಕ್ಯವು. ವಾಯುನುಂಗಿದ ಪರಿಮಳದಂತೆ ಲಿಂಗೈಕ್ಯವು. ಉರಿಯೊಳಡಗಿದ ಕರ್ಪೂರದಂತೆ ಲಿಂಗೈಕ್ಯವು. ಭಾವವನಡಸಿದ ಬಯಲಿನಂತೆ ಲಿಂಗೈಕ್ಯವು. ಅರಿವು ನುಂಗಿದ ಮರಹಿನಂತೆ ಲಿಂಗೈಕ್ಯವು. 'ಯತೋ ವಾಚೋ ನಿವರ್ತಂತೇ ಅಪ್ರಾಪ್ಯಮನಸಾ ಸಹ' ಎಂದುದಾಗಿ, ವಾಙ್ಮನಕ್ಕೆ ಅಗೋಚರವಾದ ಮಹಾಶರಣನ ಒಳಗೊಂಡು ಥಳಥಳಿಸಿ ಬೆಳಬೆಳಗಿ ಹೊಳೆವುತ್ತ, ನಿಶ್ಶಬ್ದ ಬ್ರಹ್ಮವಾಗಿರ್ದನಯ್ಯಾ ನಮ್ಮ ಶಂಭುಜಕ್ಕೇಶ್ವರನು.