Index   ವಚನ - 20    Search  
 
ಭಾವನೇಕೆ ಬಾರನೆನ್ನ ಮನೆಗೆ ? ಹರಿಯಮಗನನುರುಹಿದ ಗರುವದ ಭಾವನೇಕೆ ಬಾರನೆನ್ನ ಮನೆಗೆ ? ಅಸುರರ ಪುರವ ಸುಟ್ಟ ವೀರ ಭಾವನೇಕೆ ಬಾರನೆನ್ನ ಮನೆಗೆ ? ದಕ್ಷನ ಶಿರವನರಿದು, ಯಾಗವ ಕೆಡಿಸಿ ಕುರಿದಲೆಯ ಹತ್ತಿಸಿ ಬಿನ್ನಾಣದ ಬಲುಹ ಮೆರೆವ ಏಕೋಭಾವನೇಕೆ ಬಾರನೆನ್ನ ಮನೆಗೆ ? ಹರಿಯ ನಯನದ ಪೂಜೆ ಚರಣದಲೊಪ್ಪಿತ್ತೆಂಬ ದುರುಳತನವು ತನಗೆ ಬೇಡವ್ವಾ. ಪರವಧುವಿಂಗಳುಪಿ ಇಲ್ಲವೆಂಬ ವಿಗಡತನದ ದುರುಳತನ ಬೇಡವ್ವಾ. ಆತನ ಕರೆದು ತಾರವ್ವಾ, ಶಂಭುಜಕ್ಕೇಶ್ವರನ ನೆರೆದು ನೋಡುವೆನು.