Index   ವಚನ - 24    Search  
 
ಲಂಚವಂಚನಕ್ಕೆ ಕೈಯಾನದ ಭಾಷೆ. ಬಟ್ಟೆಯಲ್ಲಿ ಹೊನ್ನು ವಸ್ತ್ರ ಬಿದ್ದಿದ್ದರೆ ನಾನು ಕೈ ಮುಟ್ಟಿ ಎತ್ತಿದೆನಾದರೆ ನಿಮ್ಮಾಣೆ ನಿಮ್ಮ ಪ್ರಮಥರಾಣೆ. ಅದೇನು ಕಾರಣವೆಂದರೆ, ನೀವಿಕ್ಕಿದ ಭಿಕ್ಷದಲ್ಲಿಪ್ಪೆನಾಗಿ. ಇಂತಲ್ಲದೆ ನಾನು ಅಳಿಮನವ ಮಾಡಿ ಪರದ್ರವ್ಯಕ್ಕೆ ಆಸೆ ಮಾಡಿದೆನಾದರೆ, ನೀನಾಗಲೆ ಎನ್ನ ನರಕದಲ್ಲಿ ಅದ್ದಿ ನೀನೆದ್ದು ಹೋಗಾ ಶಂಭುಜಕ್ಕೇಶ್ವರಾ.