Index   ವಚನ - 52    Search  
 
ಅಪ್ಪಿನಲಾದ ಘಟವು ಅರ್ಪಿ[ತದ]ಲೆ ಲೀಯ, ಇಪ್ಪತ್ತೈದೆಂದು ಕುರುಹಿಡುವೆ ಏಕೆಲೆ ಮನುಜಾ. ತಾ ಹುಟ್ಟಿ ತಮ್ಮವ್ವೆ ಬಂಜೆಯೆಂಬ ನ್ಯಾಯದಲ್ಲಿ ಬೇರೆ ವಿವರಿಸಿ ತೋರಬಲ್ಲಡದು ಯೋಗ. ಅಭ್ಯಾಸಸಮಾಧಿಯಿಂ ಅನುಭವಿಗಳೆಲ್ಲರಿಗೆ ಬಯಲ ಸಮಾಧಿಯಾಗದಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನಾ.